ADVERTISEMENT

ದೆಹಲಿ: ಸಿಸೋಡಿಯಾ, ಜೈನ್ ರಾಜೀನಾಮೆ ಅಂಗೀಕಾರ- ನೂತನ ಸಚಿವರಾಗಿ ಭಾರದ್ವಾಜ್, ಅತಿಶಿ

ಪಿಟಿಐ
Published 7 ಮಾರ್ಚ್ 2023, 12:59 IST
Last Updated 7 ಮಾರ್ಚ್ 2023, 12:59 IST
   

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಇಬ್ಬರೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.

ಇದೇವೇಳೆ, ದೆಹಲಿಯ ನೂತನ ಸಚಿವರಾಗಿ ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಅವರನ್ನು ನೇಮಕ ಮಾಡಿದ್ದಾರೆ.

‘ದೆಹಲಿ ಮುಖ್ಯಮಂತ್ರಿ ಅವರ ಶಿಫಾರಸಿನ ಮೇರೆಗೆ ಮನೀಶ್ ಸಿಸೋಡಿಯಾ ಮತ್ತು ಒಬ್ಬ ಸಚಿವರ ರಾಜೀನಾಮೆಗಳನ್ನು ಅಂಗೀಕರಿಸಿದ್ದೇನೆ’ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

ದೆಹಲಿಯ ಅಬಕಾರಿ ನೀತಿ ರಚನೆ ಮತ್ತು ಅನುಷ್ಟಾನದಲ್ಲಿ ಅಕ್ರಮ ನಡೆದಿರುವ ಆರೋಪದಡಿ ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಅವರು ಸದ್ಯ, ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮೇ 30,2022ರಲ್ಲಿ ಇ.ಡಿಯಿ'ದ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್ ಸಹ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.