ADVERTISEMENT

‍ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿರಲಿ: ಆರ್‌ಎಸ್‌ಎಸ್‌

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 18:42 IST
Last Updated 7 ಜುಲೈ 2025, 18:42 IST
<div class="paragraphs"><p>ಆರ್‌ಎಸ್‌ಎಸ್‌&nbsp;</p></div>

ಆರ್‌ಎಸ್‌ಎಸ್‌ 

   

ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ ಸೂಚಿಸಿರುವ ತ್ರಿಭಾಷಾ ನೀತಿಯ ಬಗ್ಗೆ ವಿವಾದ ಎದ್ದಿರುವ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಬೇಕು ಎಂದು ಹೇಳಿದೆ.

‘ಭಾರತದಲ್ಲಿರುವ ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಎಂದು ಆರ್‌ಎಸ್‌ಎಸ್ ಹೇಳಿದೆ. ಜನರು ತಮ್ಮ ರಾಜ್ಯಗಳಲ್ಲಿ ತಮ್ಮದೇ ಆದ ಭಾಷೆ ಮಾತನಾಡುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ತಮ್ಮ ರಾಜ್ಯದ ಭಾಷೆಯಲ್ಲೇ ನೀಡಬೇಕು. ಎಲ್ಲರೂ ಅದನ್ನೇ ಒತ್ತಾಯಿಸುತ್ತಿದ್ದಾರೆ. ಇದು ಈಗಾಗಲೇ ಸ್ಥಾಪಿತವಾಗಿರುವ ವಿಚಾರ’ ಎಂದು ದೆಹಲಿಯಲ್ಲಿ ನಡೆದ ಮೂರು ದಿನಗಳ ‘ಸಂಘ ಪ್ರಾಂತ ಪ್ರಚಾರಕ್’ ಸಭೆಯ ನಂತರ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಹೇಳಿದರು.

ADVERTISEMENT

ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಹಾರಾಷ್ಟ್ರದಲ್ಲಿ ಶಿವಸೇನೆ (ಯುಬಿಟಿ) ಹಾಗೂ ಎಂಎನ್‌ಎಸ್ ಪಕ್ಷಗಳು ಭಾಷೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾಡಿರುವ ಶಿಫಾರಸುಗಳನ್ನು ವಿರೋಧಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.