ADVERTISEMENT

ಪಶ್ಚಿಮ ಬಂಗಾಳ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಶಿಕ್ಷಕರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 10:10 IST
Last Updated 24 ಜೂನ್ 2019, 10:10 IST
   

ಕೊಲ್ಕತ್ತ: ವೇತನ ಹೆಚ್ಚಿಸುವಂತೆ ಆಗ್ರಹಿಸಿ ಪಶ್ಚಿಮ ಬಂಗಾಳದ ವಿಧಾನಸಭೆ ಎದುರು ಪ್ರಾಥಮಿಕ ಶಾಲಾ ಶಿಕ್ಷಕರು ಸೋಮವಾರ ಪ್ರತಿಭಟನೆ ನಡೆಸಿದರು.

ಮಮತಾ ಬ್ಯಾನರ್ಜಿ ಸರಕಾರ ಕೆಲವು ದಿನಗಳ ಹಿಂದೆ ಕಿರಿಯ ವೈದ್ಯರ ಪ್ರತಿಭಟನೆ ಬಿಸಿ ಎದುರಿಸಿತ್ತು. ಕೊನೆಗೆ ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ಹೋರಾಟ ಹಿಂತೆಗೆದುಕೊಂಡಿದ್ದರು. ಈಗ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಯಿಂದ ಅಂತಹದ್ದೆ ಮತ್ತೊಂದು ಸಮಸ್ಯೆ ಮಮತಾ ಸರ್ಕಾರಕ್ಕೆ ಎದುರಾಗಿದೆ.

ಪಶ್ಚಿಮ ಬಂಗಾಳದ ವಿಧಾನಸಭೆ ಎದುರು ವೇತನ ಪ್ರಮಾಣದಲ್ಲಿ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನಾ ನಿರತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪೊಲೀಸರುವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.