ADVERTISEMENT

ಕಲ್ಯಾಣ್ ಸಿಂಗ್ ನಿಧನಕ್ಕೆ ಮೋದಿ, ಅಮಿತ್ ಶಾ ಸಂತಾಪ: ಯುಪಿಯಲ್ಲಿ 3 ದಿನ ಶೋಕಾಚರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2021, 17:34 IST
Last Updated 21 ಆಗಸ್ಟ್ 2021, 17:34 IST
ಪ್ರಧಾನಿ ನರೇಂದ್ರ ಮೋದಿ: ಪಿಟಿಐ ಸಂಗ್ರಹ ಚಿತ್ರ
ಪ್ರಧಾನಿ ನರೇಂದ್ರ ಮೋದಿ: ಪಿಟಿಐ ಸಂಗ್ರಹ ಚಿತ್ರ   

ವದೆಹಲಿ; ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ನಾನು ಪದಗಳನ್ನು ಮೀರಿ ದುಃಖಿತನಾಗಿದ್ದೇನೆ. ಕಲ್ಯಾಣ್ ಸಿಂಗ್ ಜಿ ... ರಾಜನೀತಿಜ್ಞ, ಹಿರಿಯ ಆಡಳಿತಗಾರ, ತಳಮಟ್ಟದ ನಾಯಕ ಮತ್ತು ಮಹಾನ್ ಮಾನವ. ಉತ್ತರ ಪ್ರದೇಶದ ಅಭಿವೃದ್ಧಿಗೆ ಅವರು ಅಳಿಸಲಾಗದ ಕೊಡುಗೆಯನ್ನು ಬಿಟ್ಟು ಹೋಗುತ್ತಾರೆ. ಅವರ ಪುತ್ರ ರಾಜವೀರ್ ಸಿಂಗ್ ಅವರನ್ನು ಮಾತನಾಡಿಸಿ ಸಾಂತ್ವನ ಹೇಳಿರುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನದಿಂದ ಅತೀವ ನೋವಾಗಿದೆ. ಅವರು ರಾಷ್ಟ್ರೀಯವಾದಿ ಮತ್ತು ಅನುಕರಣೀಯ ನಾಯಕನಾಗಿದ್ದು, ಜನರ ಸೇವೆಗೆ ಬದ್ಧವಾಗಿದ್ದರು. ಅವರ ಅನುಯಾಯಿಗಳು ಮತ್ತು ಕುಟುಂಬದ ಜೊತೆ ನಾನಿದ್ದೇನೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ADVERTISEMENT

ಕಲ್ಯಾಣ್ ಸಿಂಗ್ ಅವರ ನಿಧನದಿಂದ ನಾನು ಸೇರಿದಂತೆ ದೇಶಾದ್ಯಂತ ಕೋಟ್ಯಂತರ ಜನರಿಗೆ ನೋವಾಗಿದೆ. ಅವರು ಹಿರಿಯ ಬಿಜೆಪಿ ನಾಯಕ ಮತ್ತು ರಾಮಜನ್ಮಭೂಮಿ ಚಳವಳಿಯ ಹೀರೊ. ಹಿಂದುಳಿದ ಸಮುದಾಯಗಳ ಹಕ್ಕುಗಳಿಗಾಗಿ ಹಲವು ವರ್ಷಗಳ ಕಾಲ ಹೋರಾಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕಲ್ಯಾಣ್ ಸಿಂಗ್ ನಿಧನಕ್ಕೆ ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅವರ ಅಂತಿಮ ಸಂಸ್ಕಾರವನ್ನು ಆಗಸ್ಟ್ 23ರ ಸಂಜೆ ನರೋರಾದ ಗಂಗಾ ತೀರದಲ್ಲಿ ನೆರವೇರಿಸಲಾಗುತ್ತದೆ. ಆಗಸ್ಟ್ 23 ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.