ರೇವಂತ್ ರೆಡ್ಡಿ– ಪ್ರಧಾನಿ ಮೋದಿ
ನವದೆಹಲಿ: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ರೇವಂತ್ ರೆಡ್ಡಿಗೆ ಭರವಸೆ ನೀಡಿದ್ದಾರೆ.
ಹೈದರಾಬಾದ್‌ನ ಎಲ್.ಬಿ. ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇವಂತ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಪ್ರತಿಜ್ಞಾವಿಧಿ ಬೋಧಿಸಿದರು. ಭಟ್ಟಿ ವಿಕ್ರಮಾರ್ಕ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
119 ಸ್ಥಾನಗಳ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ನವೆಂಬರ್ 30ರಂದು ತೆಲಂಗಾಣ ವಿಧಾನಸಭೆಗೆ ಮತದಾನ ನಡೆದಿತ್ತು. ಡಿಸೆಂಬರ್ 3ರಂದು ಫಲಿತಾಂಶ ಹೊರಬಿದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.