ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಆಗಸ್ಟ್ 2025, 9:33 IST
Last Updated 3 ಆಗಸ್ಟ್ 2025, 9:33 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.</p></div>

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.

   

ಎಕ್ಸ್‌ ಖಾತೆ:@rashtrapatibhvn

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ADVERTISEMENT

ಈ ಸಂಬಂಧ ರಾಷ್ಟ್ರಪತಿ ಭವನವು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದೆ.

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಏರ್ಪಟ್ಟ ಹಿನ್ನೆಲೆ ಉಳಿದ ಚರ್ಚೆಗಳು ನಡೆದಿಲ್ಲ. ಹೀಗಾಗಿ ಮೋದಿ ಅವರು ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಜುಲೈ 21ರಿಂದ ಆರಂಭವಾದ ಮುಂಗಾರು ಅಧಿವೇಶನದಲ್ಲಿ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆ ಹೊರತುಪಡಿಸಿದರೆ ಯಾವುದೇ ಅಭಿವೃದ್ದಿ ಯೋಜನೆಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆದಿಲ್ಲ.

ರಷ್ಯಾದಿಂದ ಮಿಲಟರಿ ಉಪಕರಣಗಳು ಮತ್ತು ಇಂಧನವನ್ನು ಖರೀದಿಸಿದಕ್ಕಾಗಿ ಅಮೆರಿಕವು ಆಗಸ್ಟ್‌ 1ರಿಂದ ಜಾರಿಯಾಗುವಂತೆ ಭಾರತಕ್ಕೆ ಶೇ 25ರಷ್ಟು ರಫ್ತು ಸುಂಕವನ್ನು ವಿಧಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ಭೇಟಿ ಮಹತ್ವದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.