ADVERTISEMENT

ಪ್ರಧಾನಿ ಮೋದಿ, ಸಚಿವೆ ನಿರ್ಮಲಾ, ರಾಹುಲ್‌ರಿಂದ ಕರುಣಾನಿಧಿಗೆ ಅಂತಿಮ ನಮನ

ಕುಟುಂಬದವರಿಗೆ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2018, 9:00 IST
Last Updated 8 ಆಗಸ್ಟ್ 2018, 9:00 IST
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದರು –ಎಎನ್‌ಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದರು –ಎಎನ್‌ಐ ಚಿತ್ರ   

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದ ಮೋದಿ ನೇರವಾಗಿ ರಾಜಾಜಿ ಭವನಕ್ಕೆ ಬಂದರು.ಅವರ ಜತೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಇದ್ದರು.

ಅಂತಿಮ ದರ್ಶನ ಪಡೆದ ಬಳಿಕಕರುಣಾನಿಧಿ ಪುತ್ರ ಸ್ಟಾಲಿನ್ ಅವರನ್ನು ಸಂತೈಸಿದ ಮೋದಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್,ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರುಸಹ ಅಗಲಿದ ನಾಯಕನಿಗೆ ನಮನ ಸಲ್ಲಿಸಿದರು.

ADVERTISEMENT


ನಟರಾದ ರಜನಿಕಾಂತ್, ಕಮಲಹಾಸನ್, ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ,ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ಹತ್ತಾರು ಗಣ್ಯರು ಈಗಾಗಲೇ ಕರುಣಾನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಕರುಣಾನಿಧಿ ಗೌರವಾರ್ಥ ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ.

ಮರೀನಾ ಬೀಚ್‌ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ ನಡೆಸಬಹುದು ಎಂದು ಮದ್ರಾಸ್‌ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸ್ಟಾಲಿನ್

ಇನ್ನಷ್ಟು ಸುದ್ದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.