ADVERTISEMENT

ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ: ದಾಖಲೆಯ ಮತದಾನವಾಗಲಿ ಎಂದು ಮೋದಿ ಕರೆ

ಪಿಟಿಐ
Published 27 ಮಾರ್ಚ್ 2021, 4:05 IST
Last Updated 27 ಮಾರ್ಚ್ 2021, 4:05 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಶನಿವಾರ) ಆರಂಭಗೊಂಡಿದ್ದು, ಮತದಾರರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಎಂದು ಪ್ರಧಾನಿ ಮೋದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

‘ಅಸ್ಸಾಂನಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದ್ದು, ವಿಶೇಷವಾಗಿ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿಮತ ಚಲಾಯಿಸಬೇಕು ಎಂದು ನಾನು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

‘ಇಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗಿದ್ದು, ಅರ್ಹ ಮತದಾರರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ವಿನಂತಿಸುತ್ತೇನೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಅಸ್ಸಾಂನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಮತ್ತು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ ಮೂರು ಮತ್ತು ಎಂಟು ಹಂತದಲ್ಲಿ ಮತದಾನ ನಡೆಸಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.