ADVERTISEMENT

ಕೋವಿಡ್‌ ನಂತರ ಮೋದಿ ಮೊದಲ ವಿದೇಶಿ ಭೇಟಿ: ಬಾಂಗ್ಲಾದೇಶಕ್ಕೆ ಇಂದು ಪ್ರವಾಸ

ಏಜೆನ್ಸೀಸ್
Published 26 ಮಾರ್ಚ್ 2021, 7:13 IST
Last Updated 26 ಮಾರ್ಚ್ 2021, 7:13 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಢಾಕಾಗೆ ಇಂದು(ಶುಕ್ರವಾರ) ಭೇಟಿ ನೀಡಲಿದ್ದಾರೆ.

ಮಾರ್ಚ್‌ 17ರಿಂದ 27ರವರೆಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ. 1971ರ ವಿಮೋಚನಾ ಯುದ್ಧದ ನಂತರ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂಭ್ರಮದ ಜೊತೆಗೆ ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವವೂ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 26ರಂದು ಢಾಕಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬಾಂಗ್ಲಾದೇಶ– ಭಾರತದ 50 ವರ್ಷಗಳ ರಾಜತಾಂತ್ರಿಕ ಸಂಬಂಧದ ದ್ಯೋತಕವಾಗಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

‘ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ' ಎಂದು ವಿದೇಶಾಂಗ ಕಾರ್ಯದರ್ಶಿ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್‌ ಅಬ್ದುಲ್ ಮೊಮೆನ್ ಹೇಳಿದ್ದಾರೆ.

ಕೋವಿಡ್‌ ಸಾಂಕ್ರಾಮಿಕ ಕಾಣಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರಯಾಣ ಇದಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.