ADVERTISEMENT

ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಮೋದಿ: ಬರ್ತಾರಾ ಪಾಕಿಸ್ತಾನದ ಸಹೋದರಿ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಆಗಸ್ಟ್ 2023, 6:43 IST
Last Updated 30 ಆಗಸ್ಟ್ 2023, 6:43 IST
ಎಎನ್‌ಐ ವಿಡಿಯೊ ಸ್ಕ್ರೀನ್ ಗ್ಯ್ರಾಬ್
   ಎಎನ್‌ಐ ವಿಡಿಯೊ ಸ್ಕ್ರೀನ್ ಗ್ಯ್ರಾಬ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಶಾಲಾ ವಿದ್ಯಾರ್ಥಿಗಳೊಂದಿಗೆ ರಕ್ಷಾ ಬಂಧನ ಆಚರಿಸಿದರು. ಶಾಲಾ ಬಾಲಕಿಯರು ಪ್ರಧಾನಿಯವರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.

ಇದಕ್ಕೂ ಮುನ್ನ, ಸಾಮಾಜಿಕ ಮಾಧ್ಯಮ ‘ಎಕ್ಸ್‌’(ಟ್ವಿಟರ್)ನಲ್ಲಿ ರಕ್ಷಾ ಬಂಧನದ ಶುಭಾಶಯ ತಿಳಿಸಿರುವ ಮೋದಿ, ‘ಸಹೋದರ–ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಗಟ್ಟಿಗೊಳಿಸುವ ಈ ಹಬ್ಬವು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಈ ಹಬ್ಬವು ಸಾಮರಸ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲಿ ಎಂದು ಆಶಿಸುತ್ತೇನೆ. ಪ್ರತಿಯೊಬ್ಬರಿಗೂ ರಕ್ಷಾ ಬಂಧನದ ಶುಭಾಶಯಗಳು’ ಎಂದು ಹೇಳಿದರು.

ಪ್ರತಿವರ್ಷದಂತೆ ಈ ಬಾರಿಯೂ ರಕ್ಷಾ ಬಂಧನಕ್ಕೆ ಪ್ರಧಾನಿ ಮೋದಿಯವರಿಗೆ ಪಾಕಿಸ್ತಾನ ಸಹೋದರಿ ಖಮರ್ ಮೊಹ್ಸಿನ್ ಶೇಖ್ ದೆಹಲಿಗೆ ಆಗಮಿಸಿ ರಾಖಿ ಕಟ್ಟುವ ಸಾಧ್ಯತೆ ಇದೆ.

ADVERTISEMENT

‘ಕೋವಿಡ್‌ ಕಾರಣದಿಂದ ಕಳೆದ 2–3 ವರ್ಷಗಳಿಂದ ಮೋದಿ ಅವರನ್ನು ಭೇಟಿಯಾಗಿ ರಾಖಿ ಕಟ್ಟಲು ಸಾಧ್ಯವಾಗಲಿಲ್ಲ. ಈ ವರ್ಷ ನಾನು ನನ್ನ ಕೈಯಾರೆ ತಯಾರಿಸಿದ ರಾಖಿ ಹಾಗೂ ಕೃಷಿ ಸಂಬಂಧಿ ಪುಸ್ತಕದೊಂದಿಗೆ ದೆಹಲಿಗೆ ತೆರಳಲಿದ್ದೇನೆ’ ಎಂದು ಖಮರ್‌ ಈ ಹಿಂದೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.