ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ಧಾರೆ.
ಕ್ರೂರ ವಿಧಿಯು ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಚಿತ್ರಗಳು ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಪುನೀತ್ಜೊತೆ ತೆಗೆಸಿಕೊಂಡ ಫೋಟೊವನ್ನು ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.