ADVERTISEMENT

ದೇಶದ ಜನರಿಗೆ ರಂಜಾನ್‌ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪಿಟಿಐ
Published 22 ಏಪ್ರಿಲ್ 2023, 3:06 IST
Last Updated 22 ಏಪ್ರಿಲ್ 2023, 3:06 IST
ಪ್ರಧಾನಿ ಮೋದಿ
ಪ್ರಧಾನಿ ಮೋದಿ   

ನವದೆಹಲಿ: ಈದ್‌ ಹಬ್ಬದ ಪ್ರಯುಕ್ತ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ಈದ್‌–ಉಲ್‌–ಫಿತ್ರ್ ಹಬ್ಬದ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸಹೋದರತೆ ಹೆಚ್ಚಲಿ, ಎಲ್ಲರ ಆರೋಗ್ಯಕ್ಕಾಗಿ ನಾಣು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಶನಿವಾರ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಈದ್‌–ಉಲ್‌–ಫಿತ್ರ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಈ ವಿಶೇಷ ದಿನ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರರು ಶುಭಾಶಯ ಕೋರುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.