ADVERTISEMENT

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜುಲೈ 2021, 13:33 IST
Last Updated 30 ಜುಲೈ 2021, 13:33 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.

ಈ ಕುರಿತು ಚಿತ್ರದೊಂದಿಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ್ದಾರೆ.

'ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿಯಾದೆ. ಕರ್ನಾಟಕದ ಪ್ರಗತಿಯ ಹಾದಿಯಲ್ಲಿ ಹೊಸ ಪಯಣವನ್ನು ಆರಂಭಿಸುತ್ತಿರುವ ಅವರಿಗೆ ಶುಭ ಹಾರೈಸಿದ್ದೇನೆ. ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ಕೊಟ್ಟಿದ್ದೇನೆ' ಎಂದು ಮೋದಿ ತಿಳಿಸಿದ್ದಾರೆ.

ADVERTISEMENT

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಬಸವರಾಜ ಬೊಮ್ಮಾಯಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.