ADVERTISEMENT

19ಕ್ಕೆ ಕಾಂಗ್ರೆಸ್ ಅಧ್ಯಕ್ಷರ ತವರಿಗೆ ಮೋದಿ: ಫಲಾನುಭವಿಗಳ ಕರೆತರಲು 2,582 ಬಸ್

ಐಎಎನ್ಎಸ್
Published 14 ಜನವರಿ 2023, 6:55 IST
Last Updated 14 ಜನವರಿ 2023, 6:55 IST
 ಪ್ರಧಾನಿ  ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಕಲಬುರಗಿ: ವಿಧಾನಸಭೆ ಚುನಾವಣೆಯನ್ನು ಗುರಿಯಾಸಿಗಿಸಿಕೊಂಡು ಬಿಜೆಪಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿರಲಿದೆ.

ಮಾಲ್ಖೇಡ್‌ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿಯವರು ತಾತ್ಕಾಲಿಕವಾಗಿ ನಿರ್ಮಿಸಿರುವ ಮನೆಗಳ ಆಸ್ತಿ ಪತ್ರಗಳನ್ನು 51,900 ತಾಂಡಾದ ಫಲಾನುಭವಿಗಳಿಗೆ ವಿತರಿಸಲಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶದ ರಾಯಚೂರು, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಿಂದ ತಾಂಡಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಲಬುರಗಿಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ಅಡುಗೆ ಮಾಡಲು 600 ಬಾಣಸಿಗರನ್ನು ನಿಯೋಜಿಸಲಾಗುವುದು. 200 ಊಟದ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ತಾಂಡಾ ಫಲಾನುಭವಿಗಳನ್ನು ಕರೆತರಲು 2,582 ಬಸ್‌ಗಳನ್ನು ನಿಯೋಜಿಸಲಾಗಿದೆ.

ಕಲಬುರಗಿಯು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿದೆ. ಈ ಹಿನ್ನಲೆ ರಾಜ್ಯ ಸರ್ಕಾರ ಪ್ರಭಾವಿ ಕಾರ್ಯಕ್ರಮ ರೂಪಿಸಲು ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.