ಚೆನಾಬ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯನ್ನು ಶುಕ್ರವಾರ ಉದ್ಘಾಟಿಸಿದರು.
ಸೇತುವೆಯುದ್ದಕ್ಕೂ ಭಾರತದ ಬಾವುಟವನ್ನು ಬೀಸುತ್ತಾ ಮೋದಿ ಓಡಾಡಿದರು.
ಈ ಸೇತುವೆ ನದಿಮಟ್ಟದಿಂದ 359 ಮೀಟರ್ ಎತ್ತರವಿದ್ದು, 1,315 ಮೀಟರ್ ಉದ್ದವಿದೆ. ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ.
ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ, ಚೆನಾಬ್ ನದಿ ಮೇಲೆ ಈ ಸೇತುವೆಯನ್ನು ನಿರ್ಮಿಸಲಾಗಿದೆ. ಇದು ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿದೆ.
ಚೆನಾಬ್ ರೈಲ್ವೆ ಸೇತುವೆ ಉದ್ಘಾಟನೆ ಬಳಿಕ ಮೋದಿ ಅವರು, ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯನ್ನೂ ಉದ್ಘಾಟಿಸಿದರು.
ಈ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.