ADVERTISEMENT

ಇಂದು ಸಂಜೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 3:12 IST
Last Updated 30 ಜೂನ್ 2020, 3:12 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಹಿ ಘಟನೆ ಮತ್ತು ಜುಲೈ 1ರಿಂದ ದೇಶಅನ್‌ಲಾಕ್‌ 2.0ಗೆ ಹೆಜ್ಜೆ ಇಟ್ಟಿರುವ ನಡುವೆಯೇ ನಿಗದಿಯಾಗಿರುವ ಈ ಭಾಷಣ ಸಹಜವಾಗಿಯೇ ಪ್ರಾಮುಖ್ಯತೆ ಗಳಿಸಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಪ್ರಧಾನಿ ಕಚೇರಿ ಸೋಮವಾರ ರಾತ್ರಿ 10.19ರಲ್ಲಿ ಟ್ವೀಟ್ ಮಾಡಿ ತಿಳಿಸಿದೆ.

ADVERTISEMENT

ಕೊರೊನಾ ವೈರಸ್‌ ಸೋಂಕು ದೇಶಕ್ಕೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಮಾಡುತ್ತಿರುವ 6ನೇ ಭಾಷಣ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.