ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 72 ವಸಂತಗಳನ್ನು ಪೂರೈಸಿ ಇಂದು 73ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿನವನ್ನು ಜನಸ್ನೇಹಿ ಕಾರ್ಯಕ್ರಮವನ್ನಾಗಿ ದೇಶದೆಲ್ಲೆಡೆ ಆಚರಿಸಲಾಗುವುದು ಎಂದು ಬಿಜೆಪಿ ಹೇಳಿದೆ.
ಹಲವು ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಾಡು ಮಾಡಲಾಗುತ್ತಿದೆ. ನಮೀಬಿಯಾದಿಂದ ತರಲಾಗುತ್ತಿರುವ ಎಂಟು ಚಿರತೆಗಳನ್ನು ಮೋದಿ ಅವರು ಇಂದು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಹಸ್ತಾಂತರಿಸಲಿದ್ದಾರೆ.
ಈ ಮಧ್ಯೆ ಹಲವು ನಾಯಕರು, ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.