ADVERTISEMENT

ಆದಿತ್ಯ–ಎಲ್‌ 1 ಉಡ್ಡಯನ: ಇಸ್ರೊಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಸೆಪ್ಟೆಂಬರ್ 2023, 11:35 IST
Last Updated 2 ಸೆಪ್ಟೆಂಬರ್ 2023, 11:35 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   ಪಿಟಿಐ ಚಿತ್ರ

ಬೆಂಗಳೂರು: 'ಆದಿತ್ಯ–ಎಲ್‌ 1' ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡ್ಡಯನಗೊಳಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೊ) ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಚಂದ್ರಯಾನ-3ರ ಯಶಸ್ಸಿನ ಬಳಿಕ ಭಾರತವು ಬಾಹ್ಯಕಾಶ ಪ್ರಯಾಣವನ್ನು ಮುಂದುವರೆಸಿದೆ. ಭಾರತದ ಮೊದಲ ಸೋಲಾರ್‌ ಮಿಷನ್ 'ಆದಿತ್ಯ–ಎಲ್‌ 1' ನೌಕೆಯನ್ನು ಯಶಸ್ವಿಯಾಗಿ ಉಡ್ಡಯನಗೊಳಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಮನುಕುಲದ ಏಳಿಗೆಗಾಗಿ ಬ್ರಹ್ಮಾಂಡವನ್ನು ಮತ್ತಷ್ಟು ಅರಿಯುವ ನಿಟ್ಟಿನಲ್ಲಿ ನಮ್ಮ( ಭಾರತ) ದಣಿವರಿಯದ ಪ್ರಯತ್ನವು ಮುಂದುವರೆಯಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.