ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್ ಮತ್ತು ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಕ್ಷಣಾ ಕ್ಷೇತ್ರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
‘ಬೆಲ್ಜಿಯಂನ ರಾಜಕುಮಾರಿ ಆಸ್ಟ್ರಿಡ್ ಅವರನ್ನು ಭೇಟಿಯಾಗಿ ಸಂತೋಷವಾಗಿದೆ. ಭಾರತಕ್ಕೆ 300 ಸದಸ್ಯರ ಆರ್ಥಿಕ ಮಿಷನ್ ಅನ್ನು ಕಳುಹಿಸಿಕೊಡುವ ಅವರ ಅಲೋಚನೆಯನ್ನು ನಾವು ಪ್ರಶಂಸಿಸುತ್ತೇವೆ. ಹಾಗೆಯೇ ವ್ಯಾಪಾರ, ತಂತ್ರಜ್ಞಾನ, ರಕ್ಷಣಾ, ಕೃಷಿ, ವಿಜ್ಞಾನ, ನಾವೀನ್ಯತೆ, ಕೌಶಲ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೊಸ ಪಾಲುದಾರಿಕೆಗಳ ಮೂಲಕ ನಮ್ಮ ಜನರಿಗೆ ಹಲವು ಅವಕಾಶಗಳನ್ನು ಒದಗಿಸಲು ಉತ್ಸುಕರಾಗಿದ್ದೇವೆ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಆಸ್ಟ್ರಿಡ್ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ಕುರಿತು ಸಚಿವರು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.