ADVERTISEMENT

ನ್ಯಾಯಾಲಯ ಕಲಾಪಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ: ಕಾನೂನು ಸಚಿವ

ಪಿಟಿಐ
Published 2 ಡಿಸೆಂಬರ್ 2022, 11:40 IST
Last Updated 2 ಡಿಸೆಂಬರ್ 2022, 11:40 IST
ಕಿರಣ್ ರಿಜಿಜು
ಕಿರಣ್ ರಿಜಿಜು   

ಚೆನ್ನೈ: ಒಂದೇ ಭಾಷೆಯ ಹೇರಿಕೆಯನ್ನು ವಿರೋಧಿಸುವುದಾಗಿ ಹೇಳಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ನ್ಯಾಯಾಲಯ ಕಲಾಪಗಳಲ್ಲಿ ಪ್ರಾದೇಶಿಕ ಭಾಷೆಗಳ ಬಳಕೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.

ತಮಿಳುನಾಡು ಡಾ. ಅಂಬೇಡ್ಕರ್ ಕಾನೂನು ವಿಶ್ವವಿದ್ಯಾನಿಲಯದ (ಟಿಎನ್‌ಡಿಎಎಲ್‌ಯು) 12ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ತಮಿಳು ಭಾಷೆಯನ್ನು ಕೊಂಡಾಡಿದರು.

ನಿಮಗೆಲ್ಲರಿಗೂ ತಿಳಿದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸಂಸ್ಕೃತಿ ಹಾಗೂ ನಮ್ಮ ಭಾಷೆಯೊಂದಿಗೆ ದೇಶವನ್ನು ಮುನ್ನಡೆಸುವ ಬದ್ಧತೆಯನ್ನು ಹೊಂದಿದ್ದಾರೆ. ನಾನು ಸಹ ಇದನ್ನು ಒತ್ತಿ ಹೇಳುತ್ತೇನೆ. ಭಾರತದ ನ್ಯಾಯಾಲಯ ಹಾಗೂ ಕಾನೂನು ವ್ಯವಸ್ಥೆಯು ಕೋರ್ಟ್ ಕಲಾಪಗಳಲ್ಲಿ ಪ್ರಾದೇಶಿಕತೆಯನ್ನು ಹೊಂದಿರಬೇಕು ಎಂದು ಹೇಳಿದರು.

ADVERTISEMENT

ಭವಿಷ್ಯದಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕು. ಈ ಕುರಿತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಎಲ್ಲ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಒಂದೇ ಒಂದು ಭಾಷೆಯ ಹೇರಿಕೆಯನ್ನು ವಿರೋಧಿಸುತ್ತೇನೆ. ನಾವು ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕು. ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ತಮಿಳು ಕೇಂದ್ರ ಸ್ಥಾನವನ್ನು ಪಡೆದಿರುವುದಕ್ಕೆ ನಾವೆಲ್ಲರೂ ಹೆಮ್ಮೆಪಟ್ಟುಕೊಳ್ಳುತ್ತೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.