ADVERTISEMENT

ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾಗೆ ಕೊಲೆ ಬೆದರಿಕೆ ಹಾಕಿದ ಕೈದಿ

ಪಿಟಿಐ
Published 22 ಫೆಬ್ರುವರಿ 2025, 5:30 IST
Last Updated 22 ಫೆಬ್ರುವರಿ 2025, 5:30 IST
<div class="paragraphs"><p>ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ</p></div>

ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ

   

(ಪಿಟಿಐ ಚಿತ್ರ)

ಜೈಪುರ: ದೌಸಾದ ಸಲಾವಾಸ್ ಜೈಲಿನ ಕೈದಿಯೊಬ್ಬ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರನ್ನು ಕೊಲ್ಲುವುದಾಗಿ ಶುಕ್ರವಾರ ರಾತ್ರಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಿಂಕು (29) ಎಂಬಾತ ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದ್ದಾರೆ.

ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಲಾದ ಮೊಬೈಲ್ ಫೋನ್ ಇರುವ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬೆಳಗಿನ ಜಾವ 3 ಗಂಟೆಯಿಂದ 7 ಗಂಟೆಯವರೆಗೆ ಜೈಲಿನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಲ್ಲಿ ಫೋನ್ ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.