ADVERTISEMENT

ದೆಹಲಿ: ಖಾಸಗಿ ಕಚೇರಿಗಳು ಪೂರ್ಣ ಬಂದ್‌

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 19:31 IST
Last Updated 11 ಜನವರಿ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೋವಿಡ್‌–19ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರ ಮಂಗಳವಾರ ನಿರ್ದೇಶನ ನೀಡಿದೆ. ತುರ್ತು ಸೇವೆ ಮತ್ತು ಇತರ ಕೆಲ ವಿನಾಯಿತಿ ಪಡೆದಿರುವ ವರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲ ಖಾಸಗಿ ಕಚೇರಿಗಳಿಗೆ ಈ ಆದೇಶ ಅನ್ವಯವಾಗಲಿದೆ.

ಇದುವರೆಗೆ ಶೇ 50ರಷ್ಟು ಸಿಬ್ಬಂದಿ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕಚೇರಿಗಳು, ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ಮನೆ
ಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT