ADVERTISEMENT

ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

ಪಿಟಿಐ
Published 9 ಡಿಸೆಂಬರ್ 2025, 14:21 IST
Last Updated 9 ಡಿಸೆಂಬರ್ 2025, 14:21 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಚೈಬಾಸಾ (ಜಾರ್ಖಂಡ್): ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭಾರಿ ವರದಕ್ಷಿಣೆ ಕಾರಣದಿಂದಾಗಿ ಮದುವೆ ಮುರಿದು ಬಿದ್ದಿದ್ದು, ಯುವತಿಯ ಆಕ್ಷೇಪಾರ್ಹ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ಬಿಹಾರದ ಔರಂಗಾಬಾದ್ ಜಿಲ್ಲೆಯ 39 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರು ಹಲವು ವರ್ಷಗಳ ಹಿಂದೆ ಮದುವೆ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಆ ಬಳಿಕ ಇಬ್ಬರ ನಡುವೆ ಇದ್ದ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಆರೋಪಿ, ಯುವತಿಯ ಖಾಸಗಿ ಫೋಟೊ ಮತ್ತು ವಿಡಿಯೊಗಳನ್ನು ಸಂಗ್ರಹಿಸಿದ್ದನು.

ಈ ಹಿಂದೆ ಸಂತ್ರಸ್ತೆಗೆ ಮದುವೆಯಾಗುವುದಾಗಿ ಆರೋಪಿ ಭರವಸೆ ನೀಡಿದ್ದನು. ಆದರೆ ಯುವತಿಯ ಮನೆಯವರು ವರದಕ್ಷಿಣೆ ನೀಡಲು ಸಾಮರ್ಥರಲ್ಲ ಎಂದು ತಿಳಿದ ಬಳಿಕ ಮದುವೆಯನ್ನು ನಿರಾಕರಿಸಿದ್ದಾನೆ. ಜತೆಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ.

ಐದು ಲಕ್ಷ ಹಣಕ್ಕಾಗಿ ಆರೋಪಿ ಬೇಡಿಕೆ ಇಟ್ಟಿದ್ದನು. ಹಣ ನೀಡದಿದ್ದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದಾಗಿ ತಿಳಿಸಿದ್ದನು. ಆದರೆ ಹಣ ನೀಡಲು ವಿಫಲರಾದ ಕಾರಣ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ನಡುವೆ ಆರೋಪಿಯು ಮತ್ತೊಬ್ಬ ಮಹಿಳೆಯೊಂದಿಗೆ ಮದುವೆಯಾಗಿದ್ದನು. ಆರೋಪಿಯ ಮೊಬೈಲ್‌ ಫೋನ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಸಹಚರನನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.