ಪಟ್ನಾ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಪಟ್ನಾಗೆ ಭೇಟಿ ನೀಡಲಿದ್ದು, ಮಹಿಳಾ ಸ್ವಸಹಾಯ ಗುಂಪುಗಳ ಜತೆ ಸಂವಾದ ನಡೆಸಲಿದ್ದಾರೆ. ಆ ನಂತರ ಅವರು ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದರು.
ಇದು ಚುನಾವಣೆ ಸಮೀಪಿಸುತ್ತಿರುವ ಬಿಹಾರಕ್ಕೆ ತಿಂಗಳಲ್ಲಿ ಪ್ರಿಯಾಂಕಾ ಅವರು ನೀಡುತ್ತಿರುವ ಎರಡನೇ ಭೇಟಿಯಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್‌ನಲ್ಲಿ ಬಿಹಾರದಲ್ಲಿ ಹಮ್ಮಿಕೊಂಡಿದ್ದ ‘ಮತದಾರರ ಅಧಿಕಾರ ಯಾತ್ರೆ’ಯಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.