ADVERTISEMENT

ಬಿ.ಇಡಿ ಪ್ರವೇಶ ಪರೀಕ್ಷೆ ಬಗ್ಗೆ ಮರುಚಿಂತನೆ ನಡೆಸಲು ಪ್ರಿಯಾಂಕಾ ಒತ್ತಾಯ

ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು

ಪಿಟಿಐ
Published 28 ಜುಲೈ 2020, 6:50 IST
Last Updated 28 ಜುಲೈ 2020, 6:50 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ಮುಂದಿನ ತಿಂಗಳ 8ರಂದು ನಡೆಯಬೇಕಿರುವ ಬಿ.ಇಡಿ ಪ್ರವೇಶ ಪರೀಕ್ಷೆಯ ಬಗ್ಗೆ ಮರುಚಿಂತನೆ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆಗಮನಹರಿಸಿದೆ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ. ಪರೀಕ್ಷೆ ಬರೆಯಲಿರುವ ಸುಮಾರು 4.5 ಲಕ್ಷ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಸರ್ಕಾರ ಯೋಚಿಸಬೇಕು ಎಂದಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ನಿಗದಿಯಂತೆ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಮರುಚಿಂತನೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.