ADVERTISEMENT

ಕ್ರೈಸ್ತ ಸನ್ಯಾಸಿನಿಯರ ಬಂಧನ: ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ಪಿಟಿಐ
Published 30 ಜುಲೈ 2025, 13:54 IST
Last Updated 30 ಜುಲೈ 2025, 13:54 IST
ಕ್ಯಾಥೋಲಿಕ್ ಸನ್ಯಾಸಿನಿಯರ ಬಂಧನ ಖಂಡಿಸಿ ಪ್ರಿಯಾಂಕ ವಾದ್ರಾ ಅವರು ಕೇರಳದ ಸಂಸದರ ಜೊತೆ ಸಂಸತ್‌ ಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಕ್ಯಾಥೋಲಿಕ್ ಸನ್ಯಾಸಿನಿಯರ ಬಂಧನ ಖಂಡಿಸಿ ಪ್ರಿಯಾಂಕ ವಾದ್ರಾ ಅವರು ಕೇರಳದ ಸಂಸದರ ಜೊತೆ ಸಂಸತ್‌ ಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.   

ನವದೆಹಲಿ: ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಖಂಡಿಸಿ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾ ಅವರು ಸಂಸತ್‌ ಭವನದ ಆವರಣದಲ್ಲಿ ಬುಧವಾರ ಕೇರಳದ ಹಲವು ವಿಪಕ್ಷ ಸಂಸದರ ಜೊತೆಗೂಡಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಇದೇ ವೇಳೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಕಲಾಪ ಆರಂಭಕ್ಕೂ ಮುನ್ನ ಪ್ರಿಯಾಂಕಾ ಅವರೊಂದಿಗೆ ಕಾಂಗ್ರೆಸ್‌ನ ಕೆ.ಸಿ.ವೇಣುಗೋಪಾಲ್, ಆರ್‌ಎಸ್‌ಪಿ ಸಂಸದ ಎನ್‌.ಕೆ. ಪ್ರೇಮಚಂದ್ರನ್‌ ಮತ್ತು ಕೇರಳದ ಕಾಂಗ್ರೆಸ್‌ ಸಂಸದರು ಕ್ರೈಸ್ತ ಸನ್ಯಾಸಿನಿಯರ ಬಿಡುಗಡೆಗೆ ಆಗ್ರಹಿಸಿ ಸಂಸತ್ತಿನ ಮಕರದ್ವಾರದ ಬಳಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT