ADVERTISEMENT

ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ: ಪ್ರಿಯಾಂಕಾ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 10:26 IST
Last Updated 10 ನವೆಂಬರ್ 2021, 10:26 IST
   

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಶ್ವಾಸನೆ ನೀಡುವುದನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವಧನ ನೀಡುವುದಾಗಿ ಬುಧವಾರ ಪ್ರಕಟಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ’ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು ಅವಮಾನಿಸುತ್ತಿದೆ’ ಎಂದು ದೂರಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಲು ಬಯಸಿದ್ದ ಆಶಾ ಕಾರ್ಯಕರ್ತರ ಮೇಲೆ ಶಹಜಹಾನ್‌ಪುರದಲ್ಲಿ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ತುಣಕನ್ನು ಟ್ಯಾಗ್‌ ಮಾಡಿದ್ದಾರೆ.

’ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ನಡೆಸುವ ಪ್ರತಿ ದಾಳಿಯೂ ಅವರ ಸೇವಾ ಕಾರ್ಯವನ್ನು ಅವಮಾನಿಸಿದಂತೆ. ಆಶಾ ಕಾರ್ಯಕರ್ತೆಯರು ಕೋವಿಡ್ ಸೇರಿದಂತೆ ಬೇರೆ ಬೇರೆ ಸಂದರ್ಭಗಳಲ್ಲಿ ಶ್ರದ್ಧೆಯಿಂದ ಸೇವೆ ಮಾಡಿದ್ದಾರೆ. ಗೌರವಧನವನ್ನು ಹೆಚ್ಚಿಸಿ ಎಂದು ಕೇಳುವುದು ಅವರ ಹಕ್ಕು. ಅವರ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ. ಕಾರ್ಯಕರ್ತೆಯರ ಮಾತುಗಳನ್ನು ಆಲಿಸಿ’ ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

ADVERTISEMENT

’ಆಶಾ ಸಹೋದರಿಯರು ಗೌರವಕ್ಕೆ ಅರ್ಹರು ಮತ್ತು ಈ ಹೋರಾಟದಲ್ಲಿ ನಾನು ಅವರೊಂದಿಗೆ ಇದ್ದೇನೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.