ADVERTISEMENT

ಹಿಮಾಚಲ ಪ್ರದೇಶ | ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಿಯಾಂಕಾ ಗಾಂಧಿ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2023, 5:35 IST
Last Updated 12 ಸೆಪ್ಟೆಂಬರ್ 2023, 5:35 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಶಿಮ್ಲಾ: ಹಿಮಾಚಲ ಪ್ರದೇಶದ ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದ ಕುಲುಗೆ ಆಗಮಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರಿ ಮಳೆ ಹಾಗೂ ಭೂಕುಸಿತದಿಂದಾಗಿ ಭಾರಿ ನಾಶ-ನಷ್ಟ ಸಂಭವಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿಯಾಗಲಿದ್ದಾರೆ.

ಹಿಮಾಚಲ ಪ್ರದೇಶದ ನಿಗುಲ್ಸಾರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ವಾರ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಕಿನ್ನೌರ್‌ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ADVERTISEMENT

ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಸುಮಾರು 150–300 ಮೀಟರ್‌ವರೆಗಿನ ವಿಸ್ತಾರದ ರಸ್ತೆಯೂ ಭಾರಿ ಹಾನಿಗೊಳಗಾಗಿದ್ದರಿಂದ, ಕಿನ್ನೌರ್‌ನಿಂದ ಬಂದಿದ್ದ ಸೇಬು ತುಂಬಿದ ಟ್ರಕ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.