ADVERTISEMENT

ಕೇರಳದ ಸೀರೆ ಉಟ್ಟು ಪ್ರಿಯಾಂಕಾ ಸಂಸತ್ ಪ್ರವೇಶ; ಫೋಟೊ ಕ್ಲಿಕ್ಕಿಸಿದ ರಾಹುಲ್

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2024, 10:19 IST
Last Updated 28 ನವೆಂಬರ್ 2024, 10:19 IST
<div class="paragraphs"><p>ಪ್ರಿಯಾಂಕಾ ಗಾಂಧಿವಾದ್ರಾ, ರಾಹುಲ್ ಗಾಂಧಿ</p></div>

ಪ್ರಿಯಾಂಕಾ ಗಾಂಧಿವಾದ್ರಾ, ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಂಸತ್ತಿನಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ADVERTISEMENT

ಲೋಕಸಭೆಗೆ ಇದೇ ಮೊದಲ ಬಾರಿಗೆ ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ಅವರು ಕೇರಳದ ಸಾಂಪ್ರದಾಯಿಕ 'ಕಸವು' ಸೀರೆ ಉಟ್ಟು ಆಗಮಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲೂ ವಿಡಿಯೊ ಹರಿದಾಡುತ್ತಿದೆ.

ಸಂಸತ್ತಿನ ಆವರಣದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಫೋಟೊವನ್ನು ರಾಹುಲ್ ಗಾಂಧಿ ತೆಗೆಯುತ್ತಿರುವ ದೃಶ್ಯವು, ಇಬ್ಬರ ನಡುವಣ ಉತ್ತಮ ಒಡನಾಟಕ್ಕೆ ಸಾಕ್ಷಿಯಾಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರ್ಶಿರ್ವಾದವನ್ನು ಪ್ರಿಯಾಂಕಾ ಗಾಂಧಿ ಪಡೆದರು.

ಬಳಿಕ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, 'ದೇಶಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳಿಗೆ ಆದ್ಯತೆ ನೀಡುತ್ತೇನೆ. ಸಂವಿಧಾನಕ್ಕಿಂತ ಮಿಗಿಲಾಗಿ ಬೇರೆ ಏನೂ ಇಲ್ಲ. ಸಂವಿಧಾನ ರಕ್ಷಣೆಗಾಗಿ ಹೋರಾಟ ಮುಂದುವರಿಯಲಿದೆ' ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೇರಳದ ವಯನಾಡು ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಪ್ರಿಯಾಂಕಾ ಗಾಂಧಿ ಜಯ ಗಳಿಸಿದ್ದರು.

ಪ್ರಿಯಾಂಕಾ ಗೆಲುವಿನೊಂದಿಗೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ದನಿಗೆ ಇನ್ನಷ್ಟು ಬಲ ನೀಡಲಿದೆ ಎನ್ನಲಾಗಿದೆ. ಇದಲ್ಲದೆ ಏಕಕಾಲದಲ್ಲಿ ಗಾಂಧಿ ಕುಟುಂಬದ ಮೂವರು ಸಂಸತ್ತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.