ADVERTISEMENT

ಪ್ರಿಯಾಂಕಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 12:32 IST
Last Updated 16 ಫೆಬ್ರುವರಿ 2024, 12:32 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ&nbsp;</p></div>

ಪ್ರಿಯಾಂಕಾ ಗಾಂಧಿ ವಾದ್ರಾ 

   

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರು ಪಕ್ಷದ ’ಭಾರತ್‌ ಜೋಡೊ ನ್ಯಾಯ ಯಾತ್ರೆ‘ಯಲ್ಲಿ ಶುಕ್ರವಾರ ಪಾಲ್ಗೊಳ್ಳಲಿಲ್ಲ.

ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡಿರುವ ಸಹೋದರ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರಿಗೆ ಅವರು ಶುಭ ಕೋರಿದ್ದಾರೆ. ಅಲ್ಲದೆ ಆರೋಗ್ಯ ಸುಧಾರಿಸಿದ ಕೂಡಲೇ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಅವರು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ADVERTISEMENT

ರಾಹುಲ್‌ ನೇತೃತ್ವದ ಯಾತ್ರೆಯು ಶುಕ್ರವಾರ ಸಂಜೆ ಉತ್ತರ ಪ್ರದೇಶ ಪ್ರವೇಶಿಸಿತು. ಪ್ರಿಯಾಂಕಾ ಅವರು ಉತ್ತರ ಪ್ರದೇಶದ ಚಂದೌಲಿಯಲ್ಲಿ ಯಾತ್ರೆಯನ್ನು ಸೇರಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.