ADVERTISEMENT

ಪತ್ರಕರ್ತರ ಹತ್ಯೆ ಪ್ರಕರಣ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಏಜೆನ್ಸೀಸ್
Published 25 ಆಗಸ್ಟ್ 2020, 12:54 IST
Last Updated 25 ಆಗಸ್ಟ್ 2020, 12:54 IST
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ   

ನವದೆಹಲಿ: ಪತ್ರಕರ್ತರಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಪತ್ರಕರ್ತರ ಸ್ವಾತಂತ್ರ್ಯ ಮತ್ತು ಸುರಕ್ಷತೆ ವಿಚಾರವಾಗಿ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಮೂವರು ಪತ್ರಕರ್ತರ ಹತ್ಯೆ ನಡೆದಿದ್ದು, 11 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ದೂರಿದ್ದಾರೆ.

‘ಜೂನ್‌ 19 ರಂದು ಶುಭಾಮ್‌ ಮಣಿ ತ್ರಿಪಾಠಿ, ಜುಲೈ 20 ರಂದು ವಿಕ್ರಂ ಜೋಶಿ, ಆಗಸ್ಟ್‌ 24 ರಂದು ರತನ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿದೆ. ಮೂರು ತಿಂಗಳಲ್ಲಿ ಮೂವರು ಪತ್ರಕರ್ತರನ್ನು ಕೊಲ್ಲಲಾಗಿದೆ. 11 ಪತ್ರಕರ್ತರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ. ಪತ್ರಕರ್ತರ ಸುರಕ್ಷತೆ ಮತ್ತು ಸ್ವಾತಂತ್ರ್ಯದ ವಿಚಾರದಲ್ಲಿ ಸರ್ಕರದ ನಡೆ ದುರದೃಷ್ಟಕರವಾದದ್ದು’ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಇದಕ್ಕೂ ಮೊದಲು, ಸರ್ಕಾರದ ವೇಗಕ್ಕಿಂತಲೂ ಕ್ರೈಂ ರೇಟ್‌ ಹೆಚ್ಚಳವಾಗಿದೆ ಎಂದು ಹೇಳಿದ್ದರು. ‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ದರ ದ್ವಿಗುಣವಾಗಿದೆ. ಇದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಬದ್ಧತೆಯನ್ನು ತೋರಿಸುತ್ತದೆ’ ಎಂದು ಕಿಡಿಕಾರಿದ್ದಾರೆ.

ಬಲ್ಲಿಯಾ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ರತನ್‌ ಸಿಂಗ್‌ ಕೊಲೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.