ADVERTISEMENT

ಬಿಜೆಪಿಗೆ ತಕ್ಕ ಪಾಠ ಕಲಿಸಿ: ಪ್ರಿಯಾಂಕಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 15:21 IST
Last Updated 21 ಫೆಬ್ರುವರಿ 2021, 15:21 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಲಖನೌ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಪ್ರಯಾಗರಾಜ್‌ನಲ್ಲಿ ‘ನಿಷಾದ್‌’ (ಅಂಬಿಗ) ಸಮುದಾಯದ ಜನರನ್ನು ಭೇಟಿಯಾಗಿ, ‘ಬಿಜೆಪಿಗೆ ತಕ್ಕ ಪಾಠ ಕಲಿಸು’ವಂತೆ ಮನವಿ ಮಾಡಿಕೊಂಡರು.

ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರು ಸಮುದಾಯದ ಓಲೈಕೆಗೆ ಮುಂದಾಗಿದ್ದಾರೆ. ಉತ್ತರ ಪ್ರದೇಶದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ನಿಷಾದ್ ಸಮುದಾಯದ ಮತಗಳು ನಿರ್ಣಾಯಕ ಎನಿಸಿವೆ.

ಯಮುನಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಇತ್ತೀಚೆಗೆ ಪೊಲೀಸರಿಂದ ಥಳಿತಕ್ಕೊಳಗಾದ ಅಂಬಿಗರ ಕುಟುಂಬದವರನ್ನು ಇದೇ ವೇಳೆ ಅವರು ಭೇಟಿಯಾದರು.

ADVERTISEMENT

‘ಪೊಲೀಸ್‌ ಕ್ರಮವು ನಾಚಿಕೆಗೇಡಿತನ ಸಂಗತಿ. ನೀವು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದೀರಿ. ಆದರೆ, ಅವರು ನಿಮಗಾಗಿ ಏನನ್ನೂ ಮಾಡಲಿಲ್ಲ. ನೀವು ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು’ ಎಂದು ಹೇಳಿದರು.

‘ನಿಮಗೆ ನಮ್ಮ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ. ನೀವು ನಮಗೆ ಬೆಂಬಲ ನೀಡಿ ಎಂದು ಕೋರಿದ ಅವರು, ಬಿಜೆಪಿ ಕೈಗಾರಿಕೋದ್ಯಮಿಗಳ ಬಗ್ಗೆ ಮಾತ್ರವೇ ಕಾಳಜಿ ಹೊಂದಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.