ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್‌ಬೀರ್ ಸಿಂಗ್ ಅವರು ಮಾಡಿದ್ದ ಭ್ರಷ್ಟಾಚಾರದ ಆರೋಪವನ್ನು ತನಿಖೆ ಮಾಡಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್‌ಚಂದ್ ಚಂಡೀವಾಲ್ ಸಮಿತಿಗೆ ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ನೀಡಲಾಗಿದೆ.
ಮೇ 3ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ಮಹಾರಾಷ್ಟ್ರ ಸರ್ಕಾರವು ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ತನಿಖಾ ಸಮಿತಿಗೆ ವಹಿಸಿದೆ.
ತನಿಖಾ ಸಮಿತಿ ರಚಿಸುವಂತೆ ಮಾರ್ಚ್ 20ರಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆಯಲಾಗಿತ್ತು. ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್‌ಚಂದ್ ಚಂಡೀವಾಲ್ ಅವರನ್ನೊಳಗೊಂಡ ಏಕ ಸದಸ್ಯ ಸಮಿತಿಯನ್ನು ಮಾರ್ಚ್ 30ರಂದು ರಚಿಸಲಾಗಿತ್ತು.
ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ಹೊರಗುಳಿದ ನಂತರ ರಾಜ್ಯ ಗೃಹರಕ್ಷಕ ದಳದ ಡಿಜಿ ಆಗಿ ನೇಮಕಗೊಂಡ ಬಳಿಕ ಪರಮ್‌ಬೀರ್ ಸಿಂಗ್ ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.