ADVERTISEMENT

ಜುಬಿನ್‌ ಸಾವಿನ ತನಿಖೆ ಪೂರ್ಣ: 12ಕ್ಕೆ ಆರೋಪಪಟ್ಟಿ ಸಲ್ಲಿಕೆ; ಅಸ್ಸಾಂ ಪೊಲೀಸರು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 13:26 IST
Last Updated 6 ಡಿಸೆಂಬರ್ 2025, 13:26 IST
ಜುಬಿನ್‌ ಗಾರ್ಗ್‌–ಪಿಟಿಐ ಚಿತ್ರ
ಜುಬಿನ್‌ ಗಾರ್ಗ್‌–ಪಿಟಿಐ ಚಿತ್ರ   

ಗುವಾಹಟಿ: ‘ಸಿಂಗಪುರದಲ್ಲಿ ಸಮುದ್ರದಲ್ಲಿ ಈಜುತ್ತಿದ್ದಾಗ ಗಾಯಕ ಜುಬಿನ್ ಗರ್ಗ್‌ ಮೃತಪಟ್ಟ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಡಿಸೆಂಬರ್‌ 12ರಂದು ಆರೋಪಪಟ್ಟಿ ಸಲ್ಲಿಸಲಾಗುವುದು’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

‘ನಾರ್ತ್‌ ಈಸ್ಟ್‌ ಇಂಡಿಯಾ ಫೆಸ್ಟಿವಲ್‌’ಗಾಗಿ ಸಿಂಗಪುರಕ್ಕೆ ತೆರಳಿದ್ದ ಜುಬಿನ್‌, ಸೆ.19ರಂದು ಅಲ್ಲಿ ಸ್ಕೂಬಾ ಡೈವಿಂಗ್‌ ಮಾಡುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿದ್ದರು.

‘ತನಿಖೆಯು ಬಹುತೇಕ ಪೂರ್ಣಗೊಂಡಿದೆ. ಸಂಪೂರ್ಣ ವಿವರಗಳನ್ನು ಚಾರ್ಜ್‌ಶೀಟ್‌ನಲ್ಲಿ ನೀಡಲಾಗುವುದು’ ಎಂದು ಸಿಐಡಿಯ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್‌ ಗುಪ್ತಾ ಹೇಳಿದ್ದಾರೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದ್ದು, 300 ಅಧಿಕ ಮಂದಿ ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿದೆ’ ಎಂದು ಪ್ರಕರಣದ ತನಿಖೆ ಮುನ್ನಡೆಸಿದ ಗುಪ್ತಾ ಮಾಹಿತಿ ನೀಡಿದ್ದಾರೆ. 

ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಅವರು, ಚಾರ್ಜ್‌ಶೀಟ್‌ ಸಲ್ಲಿಕೆ ಬಳಿಕ ಮಾಹಿತಿ ಗೊತ್ತಾಗಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.