ADVERTISEMENT

ಸಾಮೂಹಿಕ ಅತ್ಯಾಚಾರ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಪಿಟಿಐ
Published 1 ಅಕ್ಟೋಬರ್ 2020, 11:58 IST
Last Updated 1 ಅಕ್ಟೋಬರ್ 2020, 11:58 IST
ಹತ್ರಾಸ್‌ನಲ್ಲಿರುವ ಅತ್ಯಾಚಾರ ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಹೊರಟಿದ್ದ ರಾಜಕೀಯ ನಾಯಕರ ವಾಹನಗಳನ್ನು ಗುರುವಾರ ಘಾಜಿಯಾಬಾದ್‌–ದೆಹಲಿ ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸುತ್ತಿರುವ ಪೊಲೀಸರು.
ಹತ್ರಾಸ್‌ನಲ್ಲಿರುವ ಅತ್ಯಾಚಾರ ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಹೊರಟಿದ್ದ ರಾಜಕೀಯ ನಾಯಕರ ವಾಹನಗಳನ್ನು ಗುರುವಾರ ಘಾಜಿಯಾಬಾದ್‌–ದೆಹಲಿ ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸುತ್ತಿರುವ ಪೊಲೀಸರು.   

ಹತ್ರಾಸ್: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹತ್ರಾಸ್ ಜಿಲ್ಲೆಯಾದ್ಯಂತ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್‌ ಗುರುವಾರ ತಿಳಿಸಿದ್ದಾರೆ.

ಇದೇ ವೇಳೆ ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಹತ್ರಾಸ್‌ ಜಿಲ್ಲೆಯ 19 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಸಾವನ್ನಪ್ಪಿದ್ದು, ಬುಧವಾರ ಮುಂಜಾನೆ ಸಂತ್ರಸ್ಥೆಯ ಕುಟುಂಬದವರ ಅನುಪಸ್ಥಿತಿಯಲ್ಲಿ ಪೊಲೀಸರು ಆಕೆಯ ಶವಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ADVERTISEMENT

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ನಾಯಕರು ಕುಟುಂಬದ ಸದಸ್ಯರನ್ನು ಭೇಟಿಯಾಗಲು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಅವರ ಹಳ್ಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.