ADVERTISEMENT

ಓಮೈಕ್ರಾನ್ ತಡೆ, ಕಾನೂನು–ಸುವ್ಯವಸ್ಥೆ ಕಾಪಾಡಲು ಮುಂಬೈಯಲ್ಲಿ ನಿಷೇಧಾಜ್ಞೆ ಜಾರಿ

ಪಿಟಿಐ
Published 11 ಡಿಸೆಂಬರ್ 2021, 4:39 IST
Last Updated 11 ಡಿಸೆಂಬರ್ 2021, 4:39 IST
ಸಾಂದರ್ಭಿಕ ಚಿತ್ರ – ರಾಯಿಟರ್ಸ್
ಸಾಂದರ್ಭಿಕ ಚಿತ್ರ – ರಾಯಿಟರ್ಸ್   

ಮುಂಬೈ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ತಡೆಯಲು ಮತ್ತು ಕಾನೂನು–ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಬೈ ನಗರದಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಮತ್ತು ಭಾನುವಾರಗಳಂದು ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆ ಜನರು ಗುಂಪುಸೇರುವುದು, ಪ್ರತಿಭಟನೆಗಳನ್ನು ನಡೆಸುವುದು ಹಾಗೂ ರ್‍ಯಾಲಿಗಳನ್ನು ನಡೆಸುವಂತಿಲ್ಲ ಎಂದು ಡಿಸಿಪಿ (ಕಾರ್ಯಾಚರಣೆ) ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.‌

‘ಓಮೈಕ್ರಾನ್‌ ಹರಡುವಿಕೆ ತಡೆ ಮತ್ತು ಅಮರಾವತಿ, ಮಾಲೆಗಾಂವ್ ಹಾಗೂ ನಾಂದೇಡ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಪರಿಣಾಮ ನಗರದಲ್ಲಿ ಶಾಂತಿ–ಸುವ್ಯವಸ್ಥೆಗೆ ಭಂಗ ಬಾರದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ನಿಷೇಧಾಜ್ಞೆ ಉಲ್ಲಂಘಿಸುವವರನ್ನು ಭಾರತೀಯ ದಂಡಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.