ADVERTISEMENT

ಪ್ರವಾದಿ ಅವಹೇಳನ: ನೂಪುರ್ ಶರ್ಮಾ ಬಂಧನಕ್ಕೆ ಜಮಾತ್-ಎ-ಇಸ್ಲಾಮಿ ಹಿಂದ್‌ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜುಲೈ 2022, 1:08 IST
Last Updated 3 ಜುಲೈ 2022, 1:08 IST
ನೂಪುರ್‌ ಶರ್ಮಾ
ನೂಪುರ್‌ ಶರ್ಮಾ   

ನವದೆಹಲಿ: ಪ್ರವಾದಿ ಮಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ತಕ್ಷಣ ಬಂಧಿಸುವಂತೆ ಜಮಾತ್‌–ಎ– ಇಸ್ಲಾಮಿ ಹಿಂದ್ (ಜೆಐಎಚ್) ಶನಿವಾರ ಒತ್ತಾಯಿಸಿದೆ.

'ಕ್ಷಮೆ ಯಾಚನೆಯು ಶಿಕ್ಷೆಗೆ ಪರ್ಯಾಯವಾದರೆ, ದೇಶದಲ್ಲಿ ನ್ಯಾಯಾಲಯಗಳು ಮತ್ತು ಜೈಲುಗಳ ಅಗತ್ಯವಿಲ್ಲ'ಎಂದು ಜೆಐಎಚ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೇನಿ ಹೇಳಿದ್ದಾರೆ.

‘ದೇಶದಲ್ಲಿ ದ್ವೇಷವನ್ನು ಹುಟ್ಟುಹಾಕುತ್ತಿರುವ ರಾಜಕಾರಣಿಗಳು, ಟಿವಿ ಚಾನೆಲ್‌ಗಳು ಹಾಗೂ ಮಾಧ್ಯಮ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಹುಸೇನಿ ಕೋರಿದ್ದಾರೆ.

ADVERTISEMENT

ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿತ್ತು.

'ನೂಪುರ್‌ ಶರ್ಮಾರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೆಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.