ADVERTISEMENT

ನಾವಿಕ ವಿರುದ್ಧದ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಿದ ‘ಸುಪ್ರೀಂ’

ಪಿಟಿಐ
Published 23 ಸೆಪ್ಟೆಂಬರ್ 2022, 14:29 IST
Last Updated 23 ಸೆಪ್ಟೆಂಬರ್ 2022, 14:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸುದ್ದಿ ನಿರೂಪಕಿ ನಾವಿಕ ಕುಮಾರ್‌ ವಿರುದ್ಧ ದೇಶದಾದ್ಯಂತ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ಒಗ್ಗೂಡಿಸಿ, ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ವರ್ಗಾಯಿಸಿದೆ. ಪ್ರವಾದಿ ಮೊಹಮ್ಮದ್‌ ಕುರಿತು ಬಿಜೆಪಿಯ ಮಾಜಿ ವಕ್ತಾರೆ ಸೂಪುರ್ ಶರ್ಮಾ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದ ಟಿ.ವಿ ಚರ್ಚೆಯನ್ನು ನಾವಿಕ ಅವರು ನಿರೂಪಿಸುತ್ತಿದ್ದರು.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಕೃಷ್ಣ ಮುರಾರಿ ಅವರಿದ್ದ ಪೀಠವು, ಎಂಟು ವಾರಗಳವರೆಗೆ ನಾವಿಕ ಅವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಹೇಳಿದೆ. ಜೊತೆಗೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಖುಲಾಸೆ ಮಾಡುವಂತೆ ಕೋರಿ ನಾವಿಕ ಅವರು ದೆಹಲಿ ಹೈಕೋರ್ಟ್‌ಗೆ ಹೋಗಬಹುದು ಎಂದೂ ಪೀಠ ಹೇಳಿದೆ.

ಮುಂದಿನ ದಿನಗಳಲ್ಲಿ ನಾವಿಕ ಅವರ ವಿರುದ್ಧ ಯಾವುದೇ ಎಫ್‌ಐಆರ್‌ ದಾಖಲಾದರೂ ಅದನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಬೇಕು ಎಂದು ಪೀಠ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.