ADVERTISEMENT

ಸಿಎಎ ವಿರುದ್ಧ ತೀವ್ರ ಪ್ರತಿಭಟನೆ

ಪಿಟಿಐ
Published 19 ಫೆಬ್ರುವರಿ 2020, 19:32 IST
Last Updated 19 ಫೆಬ್ರುವರಿ 2020, 19:32 IST
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚೆನ್ನೈನ ಚೆಪಾಕ್‌ನಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು. –ಪಿಟಿಐ ಚಿತ್ರ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚೆನ್ನೈನ ಚೆಪಾಕ್‌ನಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು. –ಪಿಟಿಐ ಚಿತ್ರ   

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ನಡೆದಿದ್ದು, ಚೆನ್ನೈನ ಚೆಪಾಕ್‌ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು‌ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆಕರೆ ನೀಡಿದ್ದು, ವಿಧಾನಸಭೆ‌ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ‌ ಕಚೇರಿಗೆ ಮುತ್ತಿಗೆ ಹಾಕುವ ಭಾಗವಾಗಿ ಇಲ್ಲಿ ಜಮಾಯಿಸಿದ್ದರು.

ಈ ವಿವಾದಾತ್ಮಕ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯು ನಿರ್ಣಯ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.