ADVERTISEMENT

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಬಂಧನ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 14:20 IST
Last Updated 27 ಜೂನ್ 2022, 14:20 IST
ತೀಸ್ತಾ ಸೆಟಲ್‌ವಾಡ್ ಬಂಧನ ವಿರೋಧಿಸಿ ನವದೆಹಲಿಯಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಿತ್ತಿಪತ್ರ ಪ್ರದರ್ಶಿಸಲಾಯಿತು  ಎಎಫ್‌ಪಿ ಚಿತ್ರ
ತೀಸ್ತಾ ಸೆಟಲ್‌ವಾಡ್ ಬಂಧನ ವಿರೋಧಿಸಿ ನವದೆಹಲಿಯಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಿತ್ತಿಪತ್ರ ಪ್ರದರ್ಶಿಸಲಾಯಿತು  ಎಎಫ್‌ಪಿ ಚಿತ್ರ   

ನವದೆಹಲಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ಬಂಧನ ವಿರೋಧಿಸಿ ಜಂತರ್ ಮಂತರ್‌ನಲ್ಲಿ ಸೋಮವಾರ ವಿದ್ಯಾರ್ಥಿಗಳು, ಶಿಕ್ಷಕರು, ಹೋರಾಟಗಾರರು ಪ್ರತಿಭಟನೆ ನಡೆಸಿದರು.

300ಕ್ಕೂ ಹೆಚ್ಚು ಪ್ರತಿಭಟನಕಾರರು ಘೋಷಣೆ ಕೂಗಿದರು. ತೀಸ್ತಾ ಹಾಗೂ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ.ಶ್ರೀಕುಮಾರ್, ಸಂಜೀವ್ ಭಟ್‌ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಕಾಂಗ್ರೆಸ್‌ ನಾಯಕರಾದ ಜೈರಾಮ್ ರಮೇಶ್, ಅಜಯ್ ಮಾಕನ್‌ ಮಾತನಾಡಿ, ‘ಪಕ್ಷ ಮೂವರ ಪರವಾಗಿದ್ದು, ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ ಶಬನಂ ಹಷ್ಮಿ, ‘ಸುಪ್ರೀಂ ಕೋರ್ಟ್ ತೀರ್ಪು ಹೊರ ಬಂದ ದಿನವೇ ತೀಸ್ತಾ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿದೆ. ಇದನ್ನು ಖಂಡಿಸಲಾಗುವುದು. ಮೂವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಇತರೆ ಹೋರಾಟಗಾರರನ್ನು ಬೆದರಿಸುವ ಮತ್ತು ಮೌನವಾಗಿರಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದರು.

ದೇಶದ ವಿವಿಧೆಡೆ ತೀಸ್ತಾ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.