ADVERTISEMENT

ಮೇಕೆದಾಟು ಯೋಜನೆ ಪರ ರಾಜ್ಯದ ಸಂಸದರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 8:37 IST
Last Updated 27 ಡಿಸೆಂಬರ್ 2018, 8:37 IST
   

ನವದೆಹಲಿ: ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಆಗ್ರಹಿಸಿ ರಾಜ್ಯದ ಸಂಸದರು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂಸತ್ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೊಜನೆಯಿಂದ ಎರಡೂ ರಾಜ್ಯಗಳಿಗೆ (ಕರ್ನಾಟಕ, ತಮಿಳುನಾಡು) ಅನುಕೂಲ ಆಗಲಿದೆ ಎಂದು ಪ್ರತಿಭಟನಾಕಾರರು ಘೋಷಣೆ ‌ಕೂಗಿದರು.

ಯೋಜನೆಯಿಂದ ಕುಡಿಯುವ‌ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅನುಕೂಲವಾಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡುಒಮ್ಮತ ಪ್ರದರ್ಶಿಸಿದರು.

ಸಂಸದೆ ಶೋಭಾ ಕರಂದ್ಲಾಜೆ, ಸುರೇಶ ಅಂಗಡಿ, ಮುದ್ದಹನುಮೇಗೌಡ, ಚಂದ್ರಪ್ಪ, ಶಿವಕುಮಾರ ಉದಾಸಿ, ಧ್ರುವನಾರಾಯಣ, ಉಗ್ರಪ್ಪ ಸೇರಿದಂತೆ ಬಹುತೇಕ ಸಂಸದರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.