ADVERTISEMENT

ಪ್ರತಿಭಟನೆಯೊಂದೇ ದಾರಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಬಿಕೆಯು ವಿರೋಧ

ಪಿಟಿಐ
Published 10 ಫೆಬ್ರುವರಿ 2026, 12:31 IST
Last Updated 10 ಫೆಬ್ರುವರಿ 2026, 12:31 IST
ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್   

ನವದೆಹಲಿ: ಭಾರತ–ಅಮೆರಿಕದ ವ್ಯಾಪಾರ ಒಪ್ಪಂದವನ್ನು ಟೀಕಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಈ ಒಪ್ಪಂದ ಭಾರತಕ್ಕೆ ಅಪಾಯಕಾರಿಯಾಗಿ‌ದ್ದು, ನಾವು ಮಾತನಾಡಬೇಕಾಗುತ್ತದೆ’ ಎಂದಿದ್ದಾರೆ.

‘ಇದು ಏಕಪಕ್ಷೀಯ, ಒತ್ತಡದ ಒಪ್ಪಂದವಾಗಿದೆ. ಭಾರತದ ರೈತರು ಇದನ್ನು ಒಪ್ಪುವುದಿಲ್ಲ. ಅವರು ಸಬ್ಸಿಡಿ ಸರಕುಗಳನ್ನು ಸುರಿಯುತ್ತಾರೆ. ಇಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ರೈತರನ್ನು ರಕ್ಷಿಸಲಾಗುವುದು ಎಂಬ ಸರ್ಕಾರದ ಭರವಸೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಕಾಯತ್, ‘ಸರ್ಕಾರ ಸುಳ್ಳು ಹೇಳುತ್ತಿದೆ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು. ಪ್ರತಿಭಟನೆಯೊಂದೇ ದಾರಿ’ ಎಂದು ಹೇಳಿದ್ದಾರೆ.

ಮುಂದುವರಿದು, ‘ದೆಹಲಿ ದೂರವಿಲ್ಲ... ನಮ್ಮ ಟ್ರ್ಯಾಕ್ಟರ್‌ಗಳು ಯಾವಾಗಲೂ ಸಿದ್ಧವಾಗಿವೆ...’ ಎಂದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ಸೂಚಿಸಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.