ADVERTISEMENT

ಪಿಎಂಸಿ: ಆರ್‌ಬಿಐ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 17:14 IST
Last Updated 19 ಅಕ್ಟೋಬರ್ 2019, 17:14 IST

ಮುಂಬೈ: ಪಂಜಾಬ್‌ ಹಾಗೂ ಮಹಾರಾಷ್ಟ್ರದ ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮುಖ್ಯ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ 11.45ರ ಸುಮಾರಿಗೆ ಸೇರಿದ್ದ ಠೇವಣಿದಾರರು ಸಹಕಾರಿ ಬ್ಯಾಂಕ್ ಹಾಗೂ ಆರ್‌ಬಿಐ ವಿರುದ್ಧ ಫಲಕ ಹಿಡಿದು ಘೋಷಣೆ ಕೂಗಿದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.

ಸಹಕಾರಿ ಬ್ಯಾಂಕ್‌ನಲ್ಲಿ ₹4,335 ಕೋಟಿ ಹಗರಣ ಬೆಳಕಿಗೆ ಬಂದ ನಂತರ, ಪ್ರತಿ ದಿನ ಕೇವಲ ₹ 1 ಸಾವಿರ ಹಣ ತೆಗೆಯಲು ರಿಸರ್ವ್‌ ಬ್ಯಾಂಕ್‌ ಅವಕಾಶ ಕಲ್ಲಿಸಿತ್ತು, ನಂತರ ಅದನ್ನು ₹40 ಸಾವಿರಕ್ಕೆ ಹೆಚ್ಚಿಸಿತ್ತು.

ADVERTISEMENT

ಇದು ಆಕ್ರೋಶಕ್ಕೆ ಕಾರಣವಾಗಿದ್ದು, ನಮ್ಮ ಹಣವನ್ನು ವಾಪಸ್ ನೀಡಬೇಕು ಎಂದು ಠೇವಣಿದಾರರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.