ADVERTISEMENT

ಕೇರಳ ಸಿಎಂ ಪಿಣರಾಯಿ ವಿರುದ್ಧ ವಿಮಾನದಲ್ಲೇ ಪ್ರತಿಭಟನೆ: ಮುಂದೆ ಆಗಿದ್ದೇನು?

ಪಿಟಿಐ
Published 14 ಜೂನ್ 2022, 1:26 IST
Last Updated 14 ಜೂನ್ 2022, 1:26 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್    

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕೆಲವರು ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಟಭಟಿಸಿರುವ ಘಟನೆ ನಡೆದಿದೆ.

ಈ ಕುರಿತು ಕೆಲ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿಜಯನ್ ಅವರು ಸೋಮವಾರ ಅವರ ತವರು ಕ್ಷೇತ್ರ ಕಣ್ಣೂರಿನಿಂದ ತಿರುವನಂತಪುರಕ್ಕೆ ಮರಳುವಾಗ ವಿಮಾನದಲ್ಲಿ ಈ ಘಟನೆ ನಡೆದಿದೆ. ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ವಿಜಯನ್ ಅವರು ರಾಜೀನಾಮೆ ನೀಡಬೇಕು ಎಂದು ವಿಮಾನದೊಳಗೆ ಬಂದು ಇಬ್ಬರು ಪ್ರತಿಭಟಿಸಿದ್ದಾರೆ. ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಕೆಳಗೆ ತಳ್ಳಿದ್ದಾರೆ.

ADVERTISEMENT

ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜೊತೆ ಸಿಎಂವಿಜಯನ್ ಅವರ ಹೆಸರು ಕೇಳಿ ಬಂದಿದೆ. ಸಿಎಂ ರಾಜೀನಾಮೆ ನೀಡಬೇಕು ಎಂದು ಕೇರಳದ ಹಲವೆಡೆ ಕಳೆದ ಮೂರು ದಿನಗಳಿಂದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.