ADVERTISEMENT

ಜೋಶಿಮಠ: ನೆರವು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ

ಪರಿಸ್ಥಿತಿ ಪರಿಶೀಲಿಸಿದ ಮುಖ್ಯಮಂತ್ರಿ l 600 ಕುಟುಂಬಗಳ ಸ್ಥಳಾಂತರಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 22:17 IST
Last Updated 7 ಜನವರಿ 2023, 22:17 IST
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಭೂ ಕುಸಿತದ ಕುರಿತು ಪರಿಶೀಲನೆ ನಡೆಸಿದರು   –ಪಿಟಿಐ ಚಿತ್ರ
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಭೂ ಕುಸಿತದ ಕುರಿತು ಪರಿಶೀಲನೆ ನಡೆಸಿದರು   –ಪಿಟಿಐ ಚಿತ್ರ   

ನವದೆಹಲಿ: ಜೋಶಿಮಠ ಪಟ್ಟಣದಲ್ಲಿ ಆತಂಕದಲ್ಲಿರುವ ನಿವಾಸಿಗಳ ನೆರವಿಗೆ ಧಾವಿಸಬೇಕು ಮತ್ತು ಪರಿಹಾರ ಒದಗಿಸಬೇಕು ಎಂದು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.

ಜೋಶಿಮಠ ಪಟ್ಟಣದಲ್ಲಿ ಅಪಾಯಕಾರಿ ಮಟ್ಟದಲ್ಲಿ ಬಿರುಕು ಬಿಟ್ಟಿರುವ ಮನೆಗಳಲ್ಲಿನ ಜೀವ ಮತ್ತು ಆಸ್ತಿಪಾಸ್ತಿ ನಷ್ಟದ ಭೀತಿಯಲ್ಲಿರುವ ನಿವಾಸಿಗಳಿಗೆ ನೆರವಾಗಲು ಉತ್ತರಾಖಂಡ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಗಳಿಗೆ ಸಹಕರಿಸುವಂತೆ ಸೂಚಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಈ ಪಿಐಎಲ್ ಸಲ್ಲಿಸಿದ್ದಾರೆ.

ADVERTISEMENT

ಸ್ಥಳಾಂತರಕ್ಕೆ ಆದೇಶ (ಡೆಹ್ರಾಡೂನ್‌ ವರದಿ): ‘ಜೋಶಿಮಠಲ್ಲಿ ಆತಂಕದಲ್ಲಿರುವ 600 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು’ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಆದೇಶ ನೀಡಿದ್ದಾರೆ.

ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ‘ಜನರ ಜೀವರಕ್ಷಣೆ ಸರ್ಕಾರದ ಮೊದಲ ಆದ್ಯತೆ. ಸಮಸ್ಯೆ ಪರಿಹರಿಸಲು ಅಲ್ಪಾವಧಿ ಮತ್ತು ದೀರ್ಘಾವಧಿ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೇವಾಲಯ ಕುಸಿತ: (ಜೋಶಿಮಠ ವರದಿ): ಜೋಶಿಮಠದಲ್ಲಿ ಶುಕ್ರವಾರ ದೇವಸ್ಥಾನವೊಂದು ಕುಸಿದಿದೆ. ವರ್ಷದಿಂದ ತಮ್ಮ ಮನೆಗಳ ಗೋಡೆಗಳಲ್ಲಿ ಬೀಳುತ್ತಿರುವ ಭಾರೀ ಬಿರುಕುಗಳ ನಡುವೆ ಭಯದಲ್ಲಿಯೇ ವಾಸಿಸುತ್ತಿರುವ ನಿವಾಸಿಗಳನ್ನು ಇದು ಮತ್ತಷ್ಟು ಸಂಕಷ್ಟಕ್ಕೆ
ದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.