ADVERTISEMENT

ಇ.ಡಿ. ಕ್ರಮದಿಂದ ಸರ್ಕಾರಿ ಬ್ಯಾಂಕ್‌ಗಳಿಗೆ ₹15 ಸಾವಿರ ಕೋಟಿ: ನಿರ್ಮಲಾ ಸೀತಾರಾಮನ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 13:39 IST
Last Updated 5 ಡಿಸೆಂಬರ್ 2023, 13:39 IST
<div class="paragraphs"><p>ನಿರ್ಮಲಾ ಸೀತಾರಾಮನ್‌</p></div>

ನಿರ್ಮಲಾ ಸೀತಾರಾಮನ್‌

   

ನವದೆಹಲಿ: ಹಣದ ಅಕ್ರಮ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ₹15,186 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಇದರಲ್ಲಿ ₹15,183 ಕೋಟಿಯನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಮರಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಮಂಗಳವಾರ ತಿಳಿಸಿದ್ದಾರೆ.

ಸಾಲ ಮರುಪಾವತಿ ಮಾಡದೆ ಇರುವವರ ವಿರುದ್ಧ ಕಾನೂನಿನ ಅಡಿಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪರಿಣಾಮವಾಗಿ ಹಣವು ಭಾರಿ ಪ್ರಮಾಣದಲ್ಲಿ ಬ್ಯಾಂಕ್‌ಗಳಿಗೆ ಮರಳುತ್ತಿದೆ ಎಂದು ನಿರ್ಮಲಾ ಅವರು ಪೂರಕ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದ್ದಾರೆ.

ADVERTISEMENT

ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ 2018ರ ಅಡಿಯಲ್ಲಿ ₹ 692.89 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಾಣಿಜ್ಯ ಬ್ಯಾಂಕ್‌ಗಳಲ್ಲಿನ ಅನುತ್ಪಾದಕ ಸಾಲ ಖಾತೆಗಳ ಸಂಖ್ಯೆಯು ಎರಡು ವರ್ಷಗಳ ಹಿಂದೆ 2.19 ಕೋಟಿ ಇದ್ದಿದ್ದು ಈಗ 2.06 ಕೋಟಿಗೆ ಇಳಿಕೆಯಾಗಿದೆ ಎಂದು ಹಣಕಾಸು ಸಚಿವಾಲಯವು ರಾಜ್ಯಸಭೆಗೆ ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ ಅನುತ್ಪಾದಕ ಸಾಲದ ಮೊತ್ತವು ₹ 7.41 ಕೋಟಿ ಇದ್ದಿದ್ದು, ₹ 5.72 ಲಕ್ಷ ಕೋಟಿಗೆ ಇಳಿದಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.