ADVERTISEMENT

ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದ ಪುದುಚೇರಿ: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2021, 6:07 IST
Last Updated 5 ಡಿಸೆಂಬರ್ 2021, 6:07 IST
ಸಾಂದರ್ಭಿಕ ಚಿತ್ರ (ರಾಯಿಟರ್ಸ್)
ಸಾಂದರ್ಭಿಕ ಚಿತ್ರ (ರಾಯಿಟರ್ಸ್)   

ಪುದಚೇರಿ: ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

‘ಪುದುಚೇರಿ ಸಾರ್ವಜನಿಕ ಆರೋಗ್ಯ ಕಾಯ್ದೆ 1973’ರ ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುದುಚೇರಿ ಆರೋಗ್ಯ ಇಲಾಖೆ ಆದೇಶಿಸಿದೆ.

ದೇಶದಾದ್ಯಂತ ಈವರೆಗೆ 4 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 2 ಬೆಂಗಳೂರಿನಲ್ಲಿ, 1 ಮುಂಬೈಯಲ್ಲಿ ಹಾಗೂ ಮತ್ತೊಂದು ಗುಜರಾತ್‌ನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.