ADVERTISEMENT

ಪುಲ್ವಾಮದಲ್ಲಿ ಮೂವರು ಉಗ್ರರ ಎನ್‌ಕೌಂಟರ್‌

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 14:35 IST
Last Updated 2 ಏಪ್ರಿಲ್ 2021, 14:35 IST
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಾಪೋರ್‌ ‍ಪ್ರದೇಶದ ಘಾಟ್ ಮೊಹಲ್ಲಾದಲ್ಲಿ ಮೂವರು ಉಗ್ರರ ಎನ್‌ಕೌಂಟರ್‌ ನಡೆದ ನಂತರ ಭದ್ರತಾ ಪಡೆ ಯೋಧರು ಸ್ಥಳದಲ್ಲಿ ಬೀಡು ಬಿಟ್ಟಿದ್ದರು (ಪಿಟಿಐ ಚಿತ್ರ)
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಾಪೋರ್‌ ‍ಪ್ರದೇಶದ ಘಾಟ್ ಮೊಹಲ್ಲಾದಲ್ಲಿ ಮೂವರು ಉಗ್ರರ ಎನ್‌ಕೌಂಟರ್‌ ನಡೆದ ನಂತರ ಭದ್ರತಾ ಪಡೆ ಯೋಧರು ಸ್ಥಳದಲ್ಲಿ ಬೀಡು ಬಿಟ್ಟಿದ್ದರು (ಪಿಟಿಐ ಚಿತ್ರ)   

ಶ್ರೀನಗರ: ಇಲ್ಲಿನ ಬಿಜೆಪಿ ನಾಯಕರೊಬ್ಬರ ಮನೆ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರು ಸೇರಿ ಮೂವರು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ಗೆ ಶುಕ್ರವಾರ ಹತರಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಕಾಕಾಪೋರಾ ಪ್ರದೇಶದ ಘಾಟ್ ಮೊಹಲ್ಲಾದಲ್ಲಿ ಮುಂಜಾನೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾಗ ಉಗ್ರರು ಭದ್ರತಾ ಪಡೆ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿ ದಾಳಿ ನಡೆಸಿದ ಭದ್ರತಾ ಪಡೆ ಯೋಧರು, ಮೂವರು ಉಗ್ರರನ್ನು ಕೊಂದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಮೂವರು ಉಗ್ರರಲ್ಲಿ ಇಬ್ಬರು, ನಗರದ ನೌಗಮ್ ಪ್ರದೇಶದಲ್ಲಿ ಬಿಜೆಪಿ ಮುಖಂಡ ಅನ್ವರ್ ಅಹ್ಮದ್ ಅವರ ನಿವಾಸದ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.