ADVERTISEMENT

ಪುಲ್ವಾಮಾ | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: ಮೂವರು ಉಗ್ರರ ಹತ್ಯೆ

ಪಿಟಿಐ
Published 15 ಮೇ 2025, 7:25 IST
Last Updated 15 ಮೇ 2025, 7:25 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ನಾದರ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಪ್ರತಿದಾಳಿ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ. 

ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ. ಯೋಧರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.