ಪುಣೆ: ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ಇಲ್ಲಿ ಭಾರಿ ಮಳೆ ಆಗಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಆದರೆ, ಸೇತುವೆ ಕುಸಿದ ವೇಳೆ ಮಳೆಯಾಗುತ್ತಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿ ಪ್ರಕಾರ ಇಬ್ಬರು ಸತ್ತಿದ್ದಾರೆ. ಹಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಇದು, ಪ್ರವಾಸಿ ತಾಣವಾಗಿದ್ದು, ವಾರಾಂತ್ಯದಲ್ಲಿ ಹಾಜರಾತಿ ಹೆಚ್ಚಿರುತ್ತದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಣೆಯ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಅವರು, ‘ಒಟ್ಟು 38 ಜನರನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವ 30 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆರು ಮಂದಿಗೆ ಗಂಭೀರ ಸ್ವರೂಪದಲ್ಲಿ ಪೆಟ್ಟಾಗಿದೆ’ ಎಂದು ತಿಳಿಸಿದ್ದಾರೆ.
‘ಪರಿಹಾರ ಕಾರ್ಯ ನಡೆದಿದೆ. ಕೊಚ್ಚಿಹೋಗಿರುವವರ ಪತ್ತೆಗೆ ಶೋಧ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆದಿದೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.